ಹಾಸನ: ಜಿಲ್ಲೆಯ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿದ್ದಾರೆ.
ವಾರಾಂತ್ಯ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಜನರ ದಂಡೇ ಆಗಮಿಸುತ್ತಿದ್ದು, ಹಾಸನ ಜಿಲ್ಲಾಡಳಿತ ಶಿಷ್ಟಾಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ.
ಇದನ್ನು ಓದಿ: ಒಂದೇ ದಿನ 4 ಲಕ್ಷಕ್ಕೂ ಅಧಿಕ ಭಕ್ತರಿಂದ ಹಾಸನಾಂಬೆ ದೇವಿ ದರ್ಶನ
ಈ ನಡುವೆ ಬೆಂಗಳೂರು ಹಾಗೂ ಹಾಸನ ನಡುವೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜನರನ್ನು ನಿಯಂತ್ರಿಸಲು ಟಿಕೆಟ್ ಬುಕಿಂಗ್ ಕೂಡ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಹಾಸನಾಂಬೆ ದೇವಸ್ಥಾನ ಹಾಗೂ ಸುತ್ತಮುತ್ತ ಭಾರೀ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.
ಈಗಾಗಲೇ ಹಾಸನಾಂಬೆ ದರ್ಶನ ಪಡೆಯಲೆಂದು 50 ಸಾವಿರ ಜನರು ಮುಂಗಡ ಟಿಕೆಟ್ ಕಾಯ್ದಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಬುಕಿಂಗ್ ಕೂಡ ಸದ್ಯಕ್ಕೆ ಬಂದ್ ಆಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…