ಹಾಸನ

ಇಡೀ ರಾಜ್ಯಕ್ಕೆ ಒಳಿತಾಗುವಂತೆ ಹಾಸನಾಂಬೆ ದೇವಿ ಬಳಿ ಪ್ರಾರ್ಥನೆ ಸಲ್ಲಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಹಾಸನ: ಹಾಸನಾಂಬೆ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು.

ಹಾಸನಾಂಬ ದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಕಳೆದ ವರ್ಷವೂ ದರ್ಶನ ಪಡೆದಿದ್ದೆ. ಈ ವರ್ಷವೂ ದರ್ಶನ‌ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.

ಇದನ್ನು ಓದಿ: ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಈ ಬಾರಿ ಅಗತ್ಯಕ್ಕಿಂತ ಹೆಚ್ವು ಮಳೆ ಬಿದ್ದು ರೈತರಿಗೆ ಆಗಿರುವ ನಷ್ಟ ಭರಿಸಲು NDRF ನಿಧಿ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ನೀಡುತ್ತಿದ್ದೇವೆ. ಹಿಂದೆಂದೂ ಯಾರೂ ನೀಡದಷ್ಟು ಬೆಳೆ ಹಾನಿ ಪರಿಹಾರವನ್ನು ನಾವು ನೀಡಿದ್ದೇವೆ. ಮುಂದಿನ ವರ್ಷ ಬೆಳೆ ಹಾನಿ ಪರಿಸ್ಥಿತಿ ಬರದಿರಲಿ ಎಂದು ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ನಮ್ಮದು ಕುವೆಂಪು ಅವರ ಆಶಯದ “ಸರ್ವ ಜನಾಂಗದ ಶಾಂತಿಯ ತೋಟ” ಆಗಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸೋಣ. ಎಲ್ಲಾ ಧರ್ಮದ ದೇವರ ಆಶಯವೂ ಮನುಷ್ಯ ಪ್ರೀತಿ ಮತ್ತು ಸೌಹಾರ್ದದ ಬದುಕು. ಇದಕ್ಕೆ ತಕ್ಕಂತೆ ನಾವೆಲ್ಲರೂ ಸಹೃದತೆಯಿಂದ ಮನುಷ್ಯ ಧರ್ಮವನ್ನು ಪಾಲಿಸಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

11 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago