ಹಾಸನ

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ, ಸುರೇಶ್‌ಗೆ ನೋಟಿಸ್‌ ಕೊಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ನಮ್ಮನ್ನು ಅವರು ಕರೆಯಬಾರದಿತ್ತು. ನಾವೆಲ್ಲಾ ವಿವರವಾಗಿ ಇಡಿಗೆ ಕೊಟ್ಟಿದ್ದು, ಇಡಿಯವರು ಚಾರ್ಜ್‌ಶೀಟ್‌ನಲ್ಲಿ ನಮ್ಮ ಹೆಸರೇನು ಸೇರಿಸಿಲ್ಲ. ನಮ್ಮ ಹೇಳಿಕೆ ತೆಗೆದುಕೊಂಡು ಬಿಟ್ಟಿದ್ದರು. ಈಗ ಈ ಹಂತದಲ್ಲಿ ಕರೆದಿರುವುದು ನನಗೆ ಗೊತ್ತಿಲ್ಲ. ಆದರೆ ನಾನು ಹೋಗುತ್ತೇನೆ ಎಂದು ಹೇಳಿದರು.

ಇನ್ನು ಕಾರ್ಟಿಯರ್‌ ವಾಚ್‌ ವಿಚಾರವಾಗಿ, ಯಾರು ಶರ್ಟ್‌ ಹಾಕ್ತಾರೆ, ಯಾರು ವಾಚ್‌ ಹಾಕ್ತಾರೆ, ಯಾರು ಕನ್ನಡಕ ಹಾಕುತ್ತಾರೆ ಇವೆಲ್ಲವನ್ನು ನಾನು ಪ್ರಶ್ನೆ ಮಾಡಲ್ಲ. ಇವೆಲ್ಲ ಅವರ ವೈಯಕ್ತಿಕ ವಿಚಾರಗಳು. ಅವರ ಆಸೆಗಳು. ಕೆಲವರು ಒಂದು ಸಾವಿರ ಶೂ ಹಾಕ್ತಾರೆ. ಕೆಲವರು ಹತ್ತು ಸಾವಿರ ಶೂ ಹಾಕ್ತಾರೆ. ಕೆಲವರು ಒಂದು ಲಕ್ಷದ ಶೂ ಹಾಕ್ತಾರೆ. ನಾನು ಒಂದು ಸಾವಿರದ ವಾಚು ಕಟ್ತೀನಿ. ಅದು ನನ್ನ ಆಸ್ತಿ, ಸಂಪಾದನೆ, ನನ್ನ ಕಷ್ಟ, ನನ್ನ ಶ್ರಮ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

55 mins ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 hour ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

1 hour ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

1 hour ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

1 hour ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

3 hours ago