Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಏನೇ ತೀರ್ಪು ಬಂದರೂ ಪ್ರಸಾದ ಅಂತ ಸ್ವೀಕರಿಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಈ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ದೇವರು ಹಾಗೂ ನ್ಯಾಯಾಲಯದ ಮೇಲೆ ಅಪಾರ ನಂಬಿಕೆಯಿದೆ. ಇಂದು ತೀರ್ಪು ಏನೇ ಬಂದರೂ ಅದನ್ನು ಪ್ರಸಾದ ಅಂತ ಸ್ವೀಕರಿಸುತ್ತೇನೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸವಗೌಡ ಪಾಟೀಲ್‌ ಯತ್ನಾಳ್‌ ಅವರು ಹೈಕೋರ್ಟ್‌ಗೆ ರಿಟ್‌ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತ್ತು. ಡಿಕೆಶಿ ವಿರುದ್ಧ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಂದು ಸಿಬಿಐ ತನಿಖೆ ಕುರಿತು ಹೈಕೋರ್ಟ್‌ ವಿಭಾಗೀಯ ಪೀಠ ತೀರ್ಪು ಪ್ರಕಟ ಮಾಡಲಿದೆ.

 

Tags: