ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಈ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ದೇವರು ಹಾಗೂ ನ್ಯಾಯಾಲಯದ ಮೇಲೆ ಅಪಾರ ನಂಬಿಕೆಯಿದೆ. ಇಂದು ತೀರ್ಪು ಏನೇ ಬಂದರೂ ಅದನ್ನು ಪ್ರಸಾದ ಅಂತ ಸ್ವೀಕರಿಸುತ್ತೇನೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತ್ತು. ಡಿಕೆಶಿ ವಿರುದ್ಧ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಂದು ಸಿಬಿಐ ತನಿಖೆ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟ ಮಾಡಲಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…