ಹಾಸನ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ವೃತ್ತಿ ಜೀವನಕ್ಕೆ ಹಾಜರಾಗುವೆ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ಭಾನುವಾರ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ.
ಹರ್ಷಭರ್ಧನ್ ಮೃತ ಐಪಿಎಸ್ ಅಧಿಕಾರಿ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಮೈಸೂರಿನ ದಕ್ಷಿಣ ವಲಯ ಐಜಿ ಅವರ ಬಳಿ ವರದಿ ಮಾಡಿಕೊಂಡು ಹಾಸನಕ್ಕೆ ಜೀಪ್ ನಲ್ಲಿ ಬರುವಾಗ ಕಿತ್ತಾನೆ ಬಳಿ ಸಂಜೆ 4.30 ರ ವೇಳೆಗೆ ಜೀಪ್ ನ ಟೈರ್ ಸ್ಫೋಟವಾದ ಕಾರಣ ಜೀಪ್ ಮೂರು ಸುತ್ತು ಉರುಳಿ ಅದರಲ್ಲಿ ಪ್ರಯಾಣಿಸುತ್ತಿದ್ದ ಹರ್ಷಬರ್ಧನ್ ತಲೆಗೆ ಹಾಗೂ ದೇಹದ ಇನ್ನಿತರ ಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದಿತ್ತು.
ಜೀಪ್ ಚಾಲಕ ಮಂಜೇಗೌಡರಿಗೂ ಗಾಯಗಳಾಗಿದ್ದು, ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ. ಆದರೂ ಚಿಕಿತ್ಸೆ ಫಲಿಸದೆ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ತನ್ನ ವೃತ್ತಿ ಜೀವನಕ್ಕೆ ಹಾಜರಾಗುವ ಮುನ್ನ ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ಬಿಹಾರದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಇಂಜಿನಿಯರಿಂಗ್ ಪದವಿ ಪಡೆದು 2022-23ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿದ್ದ ಇವರು ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೃತರ ತಂದೆ ಕೂಡ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…