ಹಾಸನ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಜಿಲ್ಲಾಡಳಿತಗಳು ಸಹಾಯವಾಣಿಯನ್ನು ಆರಂಭಿಸಿದ್ದು, ಜನರು ಸಿಲುಕಿದ್ದರೆ ಅವರ ಕುಟುಂಬದವರು, ಸಂಬಂಧಿಕರು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದೆ.
ಹಾಸನ ಜಿಲ್ಲಾಡಳಿತ ಸಹಾಯವಾಣಿ ಆರಂಭಿಸಿದ್ದು, ಇರಾನ್ ಹಾಗೂ ಇಸ್ರೇಲ್ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು, ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತಿದೆ ಎಂದು ಹೇಳಿದೆ.
ಹಾಸನ ಜಿಲ್ಲೆಯ ಸಾರ್ವಜನಿಕರು ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಕೂಡಲೇ ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅಥವಾ ದೂರವಾಣಿ ಸಂಖ್ಯೆ 08172-261111, ಟೋಲ್ ಫ್ರೀಂ 08172-1077 ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…