ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ದೊಡ್ಡತಪ್ಲು ಬಳಿಯೇ ಪದೇ ಪದೇ ಗುಡ್ಡ ಕುಸಿತವಾಗುತ್ತಿದ್ದು, 10 ಕಿ.ಮೀ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ. ಟ್ರಾಫಿಕ್ ಜಾಮ್ ಉಂಟಾಗಿದ್ದ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಂಕರ್ ಓಡಾಟಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಪೊಲೀಸರು ಹಾಸನದ ಕಂದಲಿ ಗ್ರಾಮದ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದು, ಮುಂದೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಸಕಲೇಶಪುರವರೆಗೆ ತೆರಳುವ ಸಾರಿಗೆ ಬಸ್‌ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗಿದ್ದು, ಮಂಗಳೂರು ಕಡೆಗೆ ಹೋಗುವ ಬಸ್‌ಗಳಿಗೆ ಹಾಸನ ತಾಲ್ಲೂಕಿನ ಕಂದಲಿ ಬಳಿಯೇ ತಡೆವೊಡ್ಡಲಾಗಿದೆ.