ಹಾಸನ: ಶಿರಾಡಿ ಘಾಟ್ ಬಳಿ ಇದ್ದಕ್ಕಿದ್ದಂತೆ ಟ್ಯಾಂಕರ್ ಲಾರಿಯೊಂದು ಹೊತ್ತಿ ಉರಿದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಶಿರಾಡಿ ಘಾಟ್ ಮಧ್ಯದ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಚಾಲನೆ ಮಾಡುವ ವೇಳೆಯೇ ಟ್ಯಾಂಕರ್ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣದಲ್ಲೇ ಎಚ್ಚೆತ್ತ ಚಾಲಕ ಟ್ಯಾಂಕರ್‌ನ್ನು ನಿಲ್ಲಿಸಿ ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾನೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಟ್ಯಾಂಕರ್ ಮುಂಭಾಗ ಸುಟ್ಟು ಕರಲಾಗಿದೆ.
ಸದ್ಯ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.