ಹಾಸನ

ಬಿಜೆಪಿಯಲ್ಲಿ ಯದುವೀರ್‌ರಂತ ಸಂತತಿ ಹೆಚ್ಚಲಿ : ದಸರಾ ಉದ್ಘಾಟಕಿ ಬಾನು ಮುಷ್ತಾಕ್‌

ಹಾಸನ : ನಾಡಹಬ್ಬ ದಸರಾ ಉದ್ಘಾಟಕರ ಆಯ್ಕೆ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದ್ದು, ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಪರ-ವಿರೋಧ ಚರ್ಚೆಗಳ ನಡುವೆ ಇದಕ್ಕೆ ಸ್ವತಃ ಬಾನು ಮುಷ್ತಾಕ್ ಪ್ರತಿಕ್ರಿಯಿಸಿದ್ದು, ಕೋಟ್ಯಾಂತರ ಕನ್ನಡಿಗರು ಎಷ್ಟೊಂದು ಪ್ರೀತಿ ಅಭಿಮಾನ ಕೊಡುತ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು ಎಂದು ಪರೋಕ್ಷವಾಗಿ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು ಅವರು, ಟೀಕಿಸಿದವರ ವಿರುದ್ಧ ಮಾತನಾಡುವ ಅಗತ್ಯ ಇಲ್ಲ ಎನ್ನಿಸುತ್ತೆ. ವಿರೋದ ಪಕ್ಷ ಆಡಳಿತ ಪಕ್ಷ ಇರಬೇಕು. ರಾಜಕೀಯ ಮಾಡಬೇಕು. ಆದರೆ ಯಾವ ವಿಚಾರದಲ್ಲಿ ರಾಜಕೀಯ ಮಾಡಬೇಕು ಯಾವುದರಲ್ಲಿ ಮಾಡಬಾರದು ಎನ್ನುವ ಪ್ರಜ್ಞೆ ಸಕ್ರಿಯ ರಾಜಕಾರಣಿಗಳಿಗೆ ಇರಬೇಕಾಗುತ್ತೆ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಮೈಸೂರು ಸಂಸದ ಯದುವೀರ್‌ ಅಂತಹವರ ಸಂತತಿ ಹೆಚ್ಚಲಿ
ಬಿಜೆಪಿ ಪಕ್ಷದಲ್ಲಿ ಮೈಸೂರಿನ ಸಂಸದ ಯದುವೀರ್ ಅಂತಹವರ ಸಂತತಿ ಹೆಚ್ಚಾಗಲಿ ಎಂದು ಅಪೇಕ್ಷೆ ಪಡುತ್ತೇನೆ. ಒಂದು ಸಮತೋಲನದಿಂದ ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದೆ ಹೇಳಿಕೆ ನೀಡಬೇಕು. ಅಂತಹ ವಿದ್ಯಾವಂತ ಸುಸಂಸ್ಕೃತ ಮನಸುಗಳಿಗೆ ಮಾತ್ರ ಸಾಧ್ಯ. ಬೂಕರ್ ಅಂತಹ ಪ್ರಶಸ್ತಿ ಸಿಗೋದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಬಹಳ ಕೇವಲವಾಗಿ ಮಾತನಾಡುತ್ತಾರೆ. ಅದರ ಬಗ್ಗೆ ನನಗೆ ಬೇಜಾರಿಲ್ಲ. ಅವರವರ ಮಟ್ಟಕ್ಕೆ ತಕ್ಕಹಾಗೆ ಮಾತಾಡ್ತಾರೆ ಮಾತಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

7 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

7 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

8 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

8 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

8 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

8 hours ago