ಹಾಸನ : ಬುದ್ಧಿಮಾಂದ್ಯ ಯುವತಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿ ಯುವತಿ ಸಹೋದರನಿಗೆ ವಿಡಿಯೋ ಕಳುಹಿಸಿ ಬ್ಕ್ಯಾಕ್ ಮೇಲ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ ಅತ್ಯಾಚಾರದ ವಿಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟು, ಇಲ್ಲದಿದ್ದರೆ ವಿಡಿಯೋವನ್ನು ವೈರಲ್ ಮಾಡುವುದಾಗಿ ತಿಳಿಸಿದ್ದಾರೆ. ವಿಡಿಯೋ ನೋಡಿದಾಗ ತನ್ನ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸಂತ್ರಸ್ತೆ ಸಹೋದರ ಅತ್ಯಾಚಾರದ ಕುರಿತು ಪೊಲೀಸರಿಗೆ ದೂರು ನೀಡಿದ್ದಾನೆ.
ವಿಡಿಯೋ ಕಳುಹಿಸಿ ನಂತರ ದುರುಳರು ಡಿಲೀಟ್ ಮಾಡಿದ್ದರು. ಆದರೆ ಅಷ್ಟುಹೊತ್ತಿಗಾಗಲೇ ಸಂತ್ರಸ್ತೆ ಸಹೋದರ ವಿಡಿಯೋವನ್ನು ತನ್ನ ಸ್ನೇಹಿತನ ಮೊಬೈಲ್‌ಗೆ ಫಾರ್ವರ್ಡ್ ಮಾಡಿದ್ದ. ಘಟನೆ ಸಂಬಂಧ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸದ್ಯ ಅತ್ಯಾಚಾರ ಎಲ್ಲಿ, ಯಾವಾಗ ನಡೆದಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





