ಹಾಸನ

ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌

ಹಾಸನ : ಬುದ್ಧಿಮಾಂದ್ಯ ಯುವತಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿ ಯುವತಿ ಸಹೋದರನಿಗೆ ವಿಡಿಯೋ ಕಳುಹಿಸಿ ಬ್ಕ್ಯಾಕ್ ಮೇಲ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ ಅತ್ಯಾಚಾರದ ವಿಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟು, ಇಲ್ಲದಿದ್ದರೆ ವಿಡಿಯೋವನ್ನು ವೈರಲ್ ಮಾಡುವುದಾಗಿ ತಿಳಿಸಿದ್ದಾರೆ. ವಿಡಿಯೋ ನೋಡಿದಾಗ ತನ್ನ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸಂತ್ರಸ್ತೆ ಸಹೋದರ ಅತ್ಯಾಚಾರದ ಕುರಿತು ಪೊಲೀಸರಿಗೆ ದೂರು ನೀಡಿದ್ದಾನೆ.

ವಿಡಿಯೋ ಕಳುಹಿಸಿ ನಂತರ ದುರುಳರು ಡಿಲೀಟ್ ಮಾಡಿದ್ದರು. ಆದರೆ ಅಷ್ಟುಹೊತ್ತಿಗಾಗಲೇ ಸಂತ್ರಸ್ತೆ ಸಹೋದರ ವಿಡಿಯೋವನ್ನು ತನ್ನ ಸ್ನೇಹಿತನ ಮೊಬೈಲ್‌ಗೆ ಫಾರ್ವರ್ಡ್ ಮಾಡಿದ್ದ. ಘಟನೆ ಸಂಬಂಧ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸದ್ಯ ಅತ್ಯಾಚಾರ ಎಲ್ಲಿ, ಯಾವಾಗ ನಡೆದಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

4 mins ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

2 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

4 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

7 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

7 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

7 hours ago