ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಇಂದು ಕೂಡ ಭಕ್ತರ ಸಂಖ್ಯೆ ತುಂಬಾ ಹೆಚ್ಚಾಗಿದೆ.
ನಿನ್ನೆಯವರೆಗೂ 17 ಲಕ್ಷ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಮೂರು ದಿನ ದೇವಿಯ ದರ್ಶನಕ್ಕೆ ಅವಕಾಶವಿದೆ.
ಇನ್ನು ಹಾಸನಾಂಬೆ ದರ್ಶನದಲ್ಲಿ ಕಾಲ್ತುಳಿತದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗೆ ಎಸ್‌ಪಿ ಪತ್ರ ಬರೆದಿದ್ದಾರೆ.
ಇದನ್ನು ಓದಿ: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ
ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು, ಪ್ರತಿದಿನವೂ ಲಕ್ಷಾಂತರ ಮಂದಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಸ್ಥಳಾವಕಾಶ ಕಡಿಮೆ ಇದೆ. ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಿದ್ದಾರೆ. ಹೊರ ಜಿಲ್ಲೆಗಳ ಭಕ್ತರನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಅನಾಹುತವಾದರೆ ನಾವು ಹೊಣೆಯಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಿಶೇಷ ಬಸ್‌ಗಳ ವ್ಯವಸ್ಥೆ ರದ್ದು ಮಾಡುವಂತೆ ಜಿಲ್ಲಾಧಿಕಾರಿಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಪತ್ರ ಬರೆದಿದ್ದು, ಕಾಲ್ತುಳಿತದ ಅತಂಕ ವ್ಯಕ್ತಪಡಿಸಿದ್ದಾರೆ.
ನಾಳೆಯಿಂದ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಅಪಾರ ಪ್ರಮಾಣದಲ್ಲಿ ಹೆಚ್ಚಾಗುವ ಎಲ್ಲಾ ಸಾಧ್ಯತೆ ಉದೆ.
ಹಾಸನ ನಗರ ಚಿಕ್ಕದಾಗಿದ್ದು, ದೇವಸ್ಥಾನದ ಸುತ್ತಮುತ್ತ ಸ್ಥಳಾವಕಾಶ ಕಡಿಮೆ ಇದೆ. ಇದೇ ರೀತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇತರೆ ವಾಹನಗಳಲ್ಲಿ ಆಗಮಿಸಿದ್ದಲ್ಲಿ ಎಲ್ಲಾ ರೀತಿಯ ಸರತಿ ಸಾಲಿನಲ್ಲಿ ಜನಸಂದಣಿ ಜಾಸ್ತಿಯಾಗಿ ಇತರೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಎಲ್ಲಾ ಸರತಿ ಸಾಲುಗಳಲ್ಲಿ ನೂಕುನುಗ್ಗಲಿನಿಂತ ಕಾಲ್ತುಳಿತ ಉಂಟಾಗಿ ಅಹಿತಕರ ಘಟನೆ ಜರುಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಹೊರ ಜಿಲ್ಲೆಗಳಿಂದ ಕೆಎಸ್‌ಆರ್‌ಟಿಸಿ ಮತ್ತು ಇತರೆ ವಾಹನಗಳ್ಲಲಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸುವಂತೆ ಕೋರಲಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…