Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕಾಂಗ್ರೆಸ್ ನಾಯಕರ ಮುಖದಲ್ಲಿ ಪಾಪ ಪ್ರಜ್ಞೆ ಕಾಣುತ್ತಿದೆ ; ಎಚ್.ಡಿ ಕುಮಾರಸ್ವಾಮಿ

ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಉತ್ತರ ನೀಡಲು ಆಗದೇ ಸಿಎಂ ಸಿದ್ದರಾಮಯ್ಯ ಮಂತ್ರಿಗಳ ಮೂಲಕ ಸಮಜಾಯಿಸಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ೯೦ ಕೋಟಿ ತಿಂದ್ರ ಭ್ರಷ್ಟಚಾರ, ೯೦ ರೂ ತಿಂದರೂ ಕೂಡ ಭ್ರಷ್ಟಚಾರ. ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಬಳಿಕ ಹಗರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್‌ ಸರ್ಕಾರಕ್ಕೆ ನಾಚಿಕೆ ಆಗಬೇಕು. ಎಚ್‌ ಡಿ ದೇವೇಗೌಡರು ಪ್ರಧಾನಿ ಆಗಿದ್ದು ಸಿಪಿಐ, ಪ್ರಾದೇಶಿಕ ಪಕ್ಷಗಳ ಬೆಂಬಲದಿಂದ ಆದ್ರೆ ಕಾಂಗ್ರೆಸ್‌ ನವರು ನಮ್ಮಿಂದ ಪ್ರಧಾನಮಂತ್ರಿ ಆದರು ಅಂತ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೆ ಮುಡಾ ಹಗರಣ ನಡೆದಿದೆ ಅಂತ ದಾಖಲೆ ಸಮೇತ ಹೇಳುತ್ತಿದ್ದೇವೆ. ಕಾಂಗ್ರೆಸ್‌ ನಾಯಕರ ಮುಖದಲ್ಲಿ ಪಾಪ ಪ್ರಜ್ಞೆ ಕಾಣುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ನವರ ಪಾಪದ ಕೊಡತುಂಬಿದೆ. ಐದು ವರ್ಷಗಳ ಹಿಂದೆಯೇ ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿದೆ. ರಾಮನಗರವನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಹೊರಟಿದ್ದಾರೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಇದೇ ವೇಳೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಬಗ್ಗೆ ನಿರ್ಧಾರವಾಗಿಲ್ಲ. ಮೋದಿ ಅಮಿತ್‌ ಶಾ ಜೊತೆ ಚರ್ಚಿಸಿ ಅಭ್ಯರ್ಥಿ ಫೈನಲ್‌ ಮಾಡುತ್ತೇವೆ ಎಂದು ತಿಳಿಸಿದರು.

Tags: