ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಉತ್ತರ ನೀಡಲು ಆಗದೇ ಸಿಎಂ ಸಿದ್ದರಾಮಯ್ಯ ಮಂತ್ರಿಗಳ ಮೂಲಕ ಸಮಜಾಯಿಸಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ೯೦ ಕೋಟಿ ತಿಂದ್ರ ಭ್ರಷ್ಟಚಾರ, ೯೦ ರೂ ತಿಂದರೂ ಕೂಡ ಭ್ರಷ್ಟಚಾರ. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಬಳಿಕ ಹಗರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕು. ಎಚ್ ಡಿ ದೇವೇಗೌಡರು ಪ್ರಧಾನಿ ಆಗಿದ್ದು ಸಿಪಿಐ, ಪ್ರಾದೇಶಿಕ ಪಕ್ಷಗಳ ಬೆಂಬಲದಿಂದ ಆದ್ರೆ ಕಾಂಗ್ರೆಸ್ ನವರು ನಮ್ಮಿಂದ ಪ್ರಧಾನಮಂತ್ರಿ ಆದರು ಅಂತ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೆ ಮುಡಾ ಹಗರಣ ನಡೆದಿದೆ ಅಂತ ದಾಖಲೆ ಸಮೇತ ಹೇಳುತ್ತಿದ್ದೇವೆ. ಕಾಂಗ್ರೆಸ್ ನಾಯಕರ ಮುಖದಲ್ಲಿ ಪಾಪ ಪ್ರಜ್ಞೆ ಕಾಣುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ನವರ ಪಾಪದ ಕೊಡತುಂಬಿದೆ. ಐದು ವರ್ಷಗಳ ಹಿಂದೆಯೇ ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿದೆ. ರಾಮನಗರವನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಹೊರಟಿದ್ದಾರೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಇದೇ ವೇಳೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಬಗ್ಗೆ ನಿರ್ಧಾರವಾಗಿಲ್ಲ. ಮೋದಿ ಅಮಿತ್ ಶಾ ಜೊತೆ ಚರ್ಚಿಸಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ತಿಳಿಸಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…