ಹಾಸನ: ಜಿಲ್ಲೆಯ ಅಧಿದೇವತೆ ವರ್ಷಕ್ಕೊಮ್ಮೆ ಮಾತ್ರ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಶಾಸಕ ಕೆ.ಗೋಪಾಲಯ್ಯ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಮಳೆ ಬೆಳೆ ಚೆನ್ನಾಗಿ ಆಗಲಿ ನಾಡಿನ ಜನತೆಗೆ ಒಳಿತಾಗಲಿ ಎಂದು ಹಾಸನಾಂಬ ದೇವಿಯಲ್ಲಿ ಪ್ರಾರ್ಥಿಸಿಕೊಂಡಿದ್ದೇನೆ. ಸಮಸ್ತ ಜನತೆಗೆ ನೆಮ್ಮದಿಯ ಜೀವನ ದಯಪಾಲಿಸುವಂತೆ ಕೋರಿರುವುದಾಗಿ ತಿಳಿಸಿದರು.
ಮುಂದುವರೆದಂತೆ ಈ ರಾಜ್ಯ ದೇಶ ಉಳಿಯಬೇಕಾದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇರಬೇಕು. ಆರ್‌ಎಸ್‌ಎಸ್ ಸಂಘಟನೆಯ ಮೇಲೆ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಉತ್ತರಿಸಿದರು.





