ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ.
ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತ್ತು.
ಇದನ್ನು ಓದಿ: ಹಾಸನಾಂಬ ದರ್ಶನಕ್ಕೆ ಇಂದೂ ಕೂಡ ಹರಿದು ಬಂದ ಜನಸಾಗರ
1,60,000 ಭಕ್ತರು ದರ್ಶನ ಪಡೆದಿದ್ದು, ಎಲ್ಲಾ ಸರತಿ ಸಾಲುಗಳು ಸಂಪೂರ್ಣ ಭರ್ತಿಯಾಗಿದ್ದು, 1000, 300 ರೂ ವಿಶೇಷ ದರ್ಶನ ಸಾಲುಗಳು ಕೂಡ ಭರ್ತಿಯಾಗಿದ್ದವು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದರು.
ಬೆಳಿಗ್ಗೆ 7 ಗಂಟೆಗೆ ಸರತಿ ಸಾಲಿನಲ್ಲಿ ನಿಂತವರು ಸಂಜೆ 4 ಗಂಟೆಗೆ ದರ್ಶನ ಪಡೆದು ಹೊರ ಬಂದಿದ್ದಾರೆ. ಗರ್ಭಗುಡಿ ಬಳಿ ನೂಕುತ್ತಿದ್ದಂತೆ ಕೆಲವರು ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಿದರು.
ಭಕ್ತರು ತಾಳ್ಮೆ ಹಾಗೂ ಶಾಂತಿಯಿಂದ ಸಹಕರಿಸಬೇಕು ಎಂದ ಅವರು, ಭಕ್ತರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.





