ಹಾಸನ

ಒಂದೇ ದಿನ 4 ಲಕ್ಷಕ್ಕೂ ಅಧಿಕ ಭಕ್ತರಿಂದ ಹಾಸನಾಂಬೆ ದೇವಿ ದರ್ಶನ

ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ.

ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತ್ತು.

ಇದನ್ನು ಓದಿ: ಹಾಸನಾಂಬ ದರ್ಶನಕ್ಕೆ ಇಂದೂ ಕೂಡ ಹರಿದು ಬಂದ ಜನಸಾಗರ

1,60,000 ಭಕ್ತರು ದರ್ಶನ ಪಡೆದಿದ್ದು, ಎಲ್ಲಾ ಸರತಿ ಸಾಲುಗಳು ಸಂಪೂರ್ಣ ಭರ್ತಿಯಾಗಿದ್ದು, 1000, 300 ರೂ ವಿಶೇಷ ದರ್ಶನ ಸಾಲುಗಳು ಕೂಡ ಭರ್ತಿಯಾಗಿದ್ದವು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದರು.

ಬೆಳಿಗ್ಗೆ 7 ಗಂಟೆಗೆ ಸರತಿ ಸಾಲಿನಲ್ಲಿ ನಿಂತವರು ಸಂಜೆ 4 ಗಂಟೆಗೆ ದರ್ಶನ ಪಡೆದು ಹೊರ ಬಂದಿದ್ದಾರೆ. ಗರ್ಭಗುಡಿ ಬಳಿ ನೂಕುತ್ತಿದ್ದಂತೆ ಕೆಲವರು ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಿದರು.

ಭಕ್ತರು ತಾಳ್ಮೆ ಹಾಗೂ ಶಾಂತಿಯಿಂದ ಸಹಕರಿಸಬೇಕು ಎಂದ ಅವರು, ಭಕ್ತರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

3 mins ago

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…

11 mins ago

ಮೈಸೂರಿನ ಒರಿಜಿನಲ್‌ ಮೈಲಾರಿ ಹೋಟೆಲ್‌ ಇದೀಗ ಬೆಂಗಳೂರಲ್ಲೂ ಲಭ್ಯ

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…

28 mins ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

2 hours ago

ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…

2 hours ago

ಕೇರಳದಲ್ಲಿ 3 ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…

2 hours ago