Mysore
15
few clouds

Social Media

ಗುರುವಾರ, 22 ಜನವರಿ 2026
Light
Dark

ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

More than 50 people fall ill after consuming prasad at fair

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್‌ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ.

ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್‌ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ ಭಕ್ತರಿಗೆ ಮೊಸರನ್ನ ಹಾಗೂ ಬಿಸಿ ಬೇಳೆ ಬಾತ್‌ ಹಂಚಿಕೆ ಮಾಡಲಾಗಿತ್ತು. ಸುಮಾರು ಒಂದೂವರೆ ಸಾವಿರ ಜನರಿಗೆ ಪ್ರಸಾದ ವಿತರಣೆ ಮಾಡಲಾಗಿತ್ತು.

ಪ್ರಸಾದ ಸೇವನೆ ಬಳಿಕ ಹೊಟ್ಟೆ ನೋವು, ವಾಂತಿಯಿಂದ ಅನೇಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾಗಿರುವ 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಸಾದ ಸೇವಿಸಿದ ಕೂಡಲೇ ಚಿಕಿತ್ಸೆ ಪಡೆದುಕೊಂಡಿದ್ದರಿಂದ ಭಕ್ತರು ಅಪಾಯದಿಂದ ಪಾರಾಗಿದ್ದಾರೆ. ಭಕ್ತರು ಸೇವಿಸಿದ ಪ್ರಸಾದದ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್‌ಗೆ ರವಾನೆ ಮಾಡಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Tags:
error: Content is protected !!