More than 50 people fall ill after consuming prasad at fair
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ.
ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ ಭಕ್ತರಿಗೆ ಮೊಸರನ್ನ ಹಾಗೂ ಬಿಸಿ ಬೇಳೆ ಬಾತ್ ಹಂಚಿಕೆ ಮಾಡಲಾಗಿತ್ತು. ಸುಮಾರು ಒಂದೂವರೆ ಸಾವಿರ ಜನರಿಗೆ ಪ್ರಸಾದ ವಿತರಣೆ ಮಾಡಲಾಗಿತ್ತು.
ಪ್ರಸಾದ ಸೇವನೆ ಬಳಿಕ ಹೊಟ್ಟೆ ನೋವು, ವಾಂತಿಯಿಂದ ಅನೇಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾಗಿರುವ 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಸಾದ ಸೇವಿಸಿದ ಕೂಡಲೇ ಚಿಕಿತ್ಸೆ ಪಡೆದುಕೊಂಡಿದ್ದರಿಂದ ಭಕ್ತರು ಅಪಾಯದಿಂದ ಪಾರಾಗಿದ್ದಾರೆ. ಭಕ್ತರು ಸೇವಿಸಿದ ಪ್ರಸಾದದ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್‌ಗೆ ರವಾನೆ ಮಾಡಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…