ಹಾಸನ: ಆರ್‌ಎಸ್‌ಎಸ್‌ಗೂ ‘ಭಾರತ ಐಕ್ಯತಾ ಯಾತ್ರೆಗೂ ಏನು ಸಂಬಂಧ, ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ರೆ ಮುಸ್ಲಿಮರ ಓಟು ನಮಗೆ ಬರುತ್ತೆ ಎಂಬ ದುರಾಸೆಯಿಂದ ಕಾಂಗ್ರೆಸ್ ಮುಖಂಡರು ಬಿಜೆಪಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದರು.
ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಪ್ರತಿಪಕ್ಷವಾಗಿ ದೇಶದಲ್ಲಿ ಏನು ಮಾಡಬೇಕಿತ್ತೋ ಆ ಕೆಲಸ ಮಾಡುವಲ್ಲಿ ವಿಫಲವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದೂರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೈ ಎಳೆದು ಜೋಡಿಸೋ ಪ್ರಯತ್ನವನ್ನು ರಾಹುಲ್ ಗಾಂಧಿ ಭಾರತ ಐಕ್ಯತಾ ಯಾತ್ರೆಯಲ್ಲಿ ರಾಜ್ಯದುದ್ದಕ್ಕೂ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಅವರು ಹೇಗೆ ಮಾತನಾಡುತ್ತಿದ್ದಾರೆ ಅನ್ನೋದನ್ನ ನಾವು ನೋಡುತ್ತಿದ್ದೇವೆ. ಭಾರತ ಐಕ್ಯತಾ ಯಾತ್ರೆ ಉದ್ದಕ್ಕೂ ಮುಸ್ಲಿಮರ ಮತ ಸೆಳೆಯಲು ಮಾತನಾಡಿದ್ದಾರೆಯೇ ಹೊರತು, ದೇಶಕ್ಕಾಗಿ ಮಾತನಾಡಿಲ್ಲ ಎಂದರು.
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…