Mysore
26
broken clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

MUDA case surpeme court verdict : CM Siddaramaiah reacts

ಹಾಸನ: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಯೂರಿಯೂ ರಸಗೊಬ್ಬರ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ. ಈ ಬಾರಿ 5 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬಿತ್ತನೆ ಆಗಿರುವುದರಿಂದ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಈ ಬಾರಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಈ ಬಾರಿ ಮುಂಗಾರು ಮಳೆ ಬೇಗ ಶುರುವಾಗಿದೆ. ಜೋಳ ಬಿತ್ತನೆ ಜಾಸ್ತಿಯಾಗಿದೆ. ಹಾಗಾಗಿ ರೈತರು ಹೆಚ್ಚು ಗೊಬ್ಬರ ಉಪಯೋಗಿಸುತ್ತಿದ್ದು, ಬೇಡಿಕೆ ಹೆಚ್ಚಾಗಿದೆ ಎಂದು ಹೇಳಿದರು.

Tags:
error: Content is protected !!