Mysore
24
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮಾಂಸಾಹಾರ ಸೇವನೆ ಹೃದಯಾಘಾತ ಹೆಚ್ಚಳಕ್ಕೆ ಕಾರಣ: ಶಾಸಕ ಎಚ್.ಡಿ.ರೇವಣ್ಣ

ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್‌ ಮೀಟ್‌ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.

ಈ ಬಗ್ಗೆ ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಾತನಾಡಿದ ಶಾಸಕ ಎಚ್.ಡಿ.ರೇವಣ್ಣ ಅವರು, ಹಾಸನದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಸಂಖ್ಯೆ ಹೆಚ್ಚಾಗಿದೆ. ಆದಾಯ ಬರುತ್ತೆ ಎಂದು ಹೆಚ್ಚಿನ ಸಂಖ್ಯೆಯಲ್ಲಿ ಬಾರ್‌ ತೆರೆಯಲಾಗಿದೆ. ಬಾರ್‌ಗಳಲ್ಲಿ ಕುಡಿದು ಅನಾಹುತ ಮಾಡಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇತ್ತೀಚೆಗೆ ಜನರು ಬೀಗರೂಟದಲ್ಲಿ ಹೆಚ್ಚು ರೆಡ್‌ ಮೀಟ್‌ ತಿನ್ನುತ್ತಾರೆ. ಇದರಿಂದ ಹೃದಯಾಘಾತ ಹೆಚ್ಚಳವಾಗುತ್ತಿದೆ. ಬಾರ್‌ಗಳಲ್ಲಿ ಕೂಡ ಹೆಚ್ಚಿನ ಜನರು ಮದ್ಯ ಕುಡಿದು ರೆಡ್‌ ಮೀಟ್‌ ತಿನ್ನುತ್ತಾರೆ. ಇದರಿಂದ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳವಾಗುತ್ತಿದೆ ಎಂದು ಹೇಳಿದರು.

Tags:
error: Content is protected !!