ಹಾಸನ

ಹಾಸನ ಜಿಲ್ಲೆಯ ರಾಜಕಾರಣದಲ್ಲಿ ಹೊಸ ಸಂಚಲನ

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಸ್ವರೂಪ್  ಹಾಗೂ ಭವಾನಿ ರೇವಣ್ಣ ಹೆಸರಿನ ನಡುವೆ ಮತ್ತೊಂದು ಹೆಸರು ತೇಲಿಬಂದಿದೆ. ಸಾಮಾನ್ಯ ಕಾರ್ಯಕರ್ತ ಹೆಸರಿನಲ್ಲಿ ಅಂತಿಮವಾಗಿ ಸ್ವರೂಪ್​ಗೆ ಟಿಕೆಟ್​ ನೀಡಿದರೆ ಭವಾನಿ ಬೆಂಬಲಿಗರು ಸಿಡಿದೇಳು ಭೀತಿ ಇದೆ. ಇನ್ನು ಭವಾನಿಗೆ ಟಿಕೆಟ್​ ನೀಡಿದರೆ ಸ್ವರೂಪ್​ ಬೆಂಬಲಿಗರು ಅಸಮಾಧಾನಗೊಳ್ಳುವ ಸಾಧ್ಯತೆಗಳು ಇವೆ. ಈ ಹಿನ್ನೆಲೆಯಲ್ಲಿ  ಈ ಇಬ್ಬರನ್ನು ಹೊರತುಪಡಿಸಿ ಹೊಸ ಮುಖಕ್ಕೆ ಮಣೆ ಹಾಕಲು ಜೆಡಿಎಸ್​   ವರಿಷ್ಠರು ತಂತ್ರ ರೂಪಿಸಿದ್ದಾರೆ.

ಜೆಡಿಎಸ್​ನ ಹಿರಿಯ ನಾಯಕ, ಹಾಸನ ನಗರಾಭಿವೃದ್ಧಿ ಪ್ರಾದಿಕಾರದ ಮಾಜಿ ಅದ್ಯಕ್ಷ ಕೆ.ಎಂ.ರಾಜೇಗೌಡ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಆ ಹೆಸರು ಕ್ಷೇತ್ರದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಹಾಸನ ಜಿಲ್ಲಾ ರಾಜಕಾರಣದಲ್ಲಿ ಸಂಚನ ಮೂಡಿಸಿದೆ. ತಮ್ಮನ್ನ ಕಡೆಗಣಿಸಿ ಸ್ಚರೂಪ್ ಟಿಕೆಟ್​ ಪಡೆದರೆ ತಮ್ಮ ನಾಯಕತ್ವ ಜಿಲ್ಲೆಯಲ್ಲಿ ಕುಗ್ಗಿದಂತಾಗುತ್ತದೆ ಎಂದು ಅರಿತ ರೇವಣ್ಣ, ತಮ್ಮ ಆಪ್ತ, ಹಾಗೂ ಮಖ್ಯವಾಗಿ ದೇವೇಗೌಡರ ಜೊತೆಗೂ ಒಡನಾಟ ಇರುವ ರಾಜೇಗೌಡರ ಹೆಸರು ಪ್ರಸ್ತಾಪಿಸಿದ್ದಾರೆ.

andolanait

Recent Posts

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

21 mins ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

32 mins ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

7 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

7 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

7 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

7 hours ago