ಹಾಸನ: ಇತ್ತೀಚೆಗೆ ಸಕಲೇಶಪುರ ಸಮೀಪದ ಮಹಿಳೆಯೊಬ್ಬರನ್ನು ತುಳಿದು ಕೊಂದು ಹಾಕಿದ್ದ ಕಾಡಾನೆ ಸೆರೆಗೆ ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದೆ.
ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು ಸುಗ್ರೀವ ಆನೆಗಳು ಈ ತಂಡದಲ್ಲಿವೆ. ಇಂದಿನಿಂದಲೇ ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ.
ಸ್ಥಳೀಯರ ಒತ್ತಾಯಕ್ಕೆ ಮಣಿದು ಕೊಡಗು ಭಾಗದಿಂದ ಬಂದ ಈ ನರಹಂತಕ ಆನೆಯನ್ನು ಸೆರೆಹಿಡಿಯಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದರು.
ಇತ್ತೀಚೆಗೆ ಆಲೂರು ಸಮೀಪ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಶೋಭ ಅವರ ಮೇಲೆ ಕಾಡಾನೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹ ಮೇಲೆತ್ತಲು ಬಿಡದೇ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ಶಾಸಕ ಸಿಮೆಂಟ್ ಮಂಜು ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕರೆ ಮಾಡಿ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪುಂಡಾನೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.
ಮದ್ದೂರು: ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್ ಯಾದವ್ ಅವರು ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ…
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಮೋಡ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ…
ಮೈಸೂರು: ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿ…
ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ…