ಹಾಸನ

ಹಾಸನ: ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲ

ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್‌ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ.

ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು, ಇಂದು ಕೂಡ ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯಾಹ್ನದ ನಂತರ ಥರ್ಮಲ್‌ ದ್ರೋಣ್ ಬಳಸಿ ಕಾಡಾನೆ ಪತ್ತೆ ಮಾಡಿ ಅದಕ್ಕೆ ವೈದ್ಯರು ಅರವಳಿಕೆ ಚುಚ್ಚುಮದ್ದು ನೀಡಲು ಮುಂದಾಗಿದ್ದರು. ಆದರೆ ಕಾರ್ಯಾಚರಣೆ ನಡೆಸುವ ಸ್ಥಳದಲ್ಲಿ ವಿಕ್ರಾಂತ್‌ ಆನೆ ಹೊರತುಪಡಿಸಿ ಬೇರೆ ಆನೆ ಇದ್ದವು. ಈ ಹಿನ್ನೆಲೆಯಲ್ಲಿ ಇಂದಿನ ಕಾರ್ಯಾಚರಣೆ ಸ್ಥಗಿತವಾಗಿದ್ದು, ನಾಳೆಯೂ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆಯಿದೆ.

ಸುಮಾರು ಇನ್ನೂರಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಜೊತೆ ನಡೆದ ಕಾರ್ಯಾಚರಣೆಯಲ್ಲಿ ಸುಮಾರು ಏಳು ಸಾಕಾನೆಗಳು ಕೂಡ ಭಾಗಿಯಾಗಿದ್ದವು. ಆದರೆ ವಿಕ್ರಾಂತ್‌ ಆನೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದು, ಸತತ ಎರಡು ದಿನಗಳ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾಕಾನೆಗಳು ಹೈರಾಣಾಗಿದ್ದು, ಹೇಗಾದರೂ ಮಾಡಿ ವಿಕ್ರಾಂತ್‌ ಆನೆಯನ್ನು ಸೆರೆಹಿಡಿಯಲೇಬೇಕು ಎಂದು ಪಣ ತೊಟ್ಟಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

9 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

9 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

10 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

10 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

11 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

11 hours ago