ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಅರಸೀಕೆರೆ ತಾಲ್ಲೂಕಿನ ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್.5ರಂದು ಸಂಜೆ ಸುಮಾರು 6.30ರ ಸಮಯದಲ್ಲಿ ಬಿ.ಎಚ್.ರಸ್ತೆಯ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.
ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಿತಿ ಗಂಭೀರವಾಗಿದ್ದು, ನಂತರ ಮೆದುಳು ನಿಷ್ಕ್ರಿಯವಾಗಿತ್ತು. ವೈದ್ಯರು ಮೋನಿಕಾಳ ಪೋಷಕರಿಗೆ ಈ ವಿಷಯ ತಿಳಿಸಿದ್ದಾರೆ. ಪೋಷಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ನಂತರ ಮಗಳ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದು, 5 ಜೀವಗಳಿಗೆ ಹೊಸ ಬೆಳಕು ನೀಡಿದ್ದಾರೆ.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್ ಪಂದ್ಯಗಳು ಏಪ್ರಿಲ್ 15 ಹಾಗೂ ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…
ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…
ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…