ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಈಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೋ, ಬಿಡುತ್ತಾರೋ ಎಂಬುದನ್ನು ಕೇಳಬಾರದು. ಪ್ರಧಾನಿ ನರೇಂದ್ರ ಮೋದಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಒಳ್ಳೆಯ ಕೆಲಸ ನೋಡಿ ಜನ ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗ ಜಮ್ಮು-ಕಾಶ್ಮೀರಕ್ಕೆ ಹೆಚ್ಚು ಪ್ರವಾಸಿಗರು ಬರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಕಠಿಣ ನಿಲುವಿನೊಂದಿಗೆ ಜಮ್ಮು-ಕಾಶ್ಮೀರದಲ್ಲಿ ಅಕ್ರಮವನ್ನು ನಿಯಂತ್ರಿಸಲಾಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಶ್ಮೀರದಲ್ಲಿರುವ ಶಿವನ ದೇವಾಲಯಕ್ಕೆ 230 ಮೆಟ್ಟಿಲುಗಳಿವೆ. ನಾನು 30 ಮೆಟ್ಟಿಲುಗಳನ್ನು ಹತ್ತಿದೆ. ನಂತರ ಸಿಆರ್‌ಪಿಎಫ್ ಯೋಧರು ನನ್ನನ್ನು ದೇವಾಲಯಕ್ಕೆ ಕರೆದುಕೊಂಡು ಹೋದರು. ಬಳಿಕ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದೆ ಎಂದು ಮಾಹಿತಿ ನೀಡಿದರು.
ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಪ್ರಧಾನಿ ನರೇಂದ್ರ ಮೋದಿಯವರ ಕಠಿಣ ಪರಿಶ್ರಮವಿದೆ. ಅದಕ್ಕಾಗಿ ಜಮ್ಮು-ಕಾಶ್ಮೀರದ ಜನತೆ ಸೂಕ್ತ ಪಕ್ಷ ಹಾಗೂ ಸೂಕ್ತ ವ್ಯಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…