ಹಾಸನ

ಪ್ರಚೋದನಕಾರಿ ಭಾಷಣ: ಪ್ರಮೋದ್‌ ಮುತಾಲಿಕ್‌ ವಿರುದ್ಧ ಪ್ರಕರಣ ದಾಖಲು

ಹಾಸನ: ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಜನವರಿ.9 ರಂದು ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಭಾಗವಹಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಭಾಷಣ ಸಮಾಜಕ್ಕೆ ಪ್ರಚೋದನಕಾರಿ ಎಂಬ ಆರೋಪದ ಮೇಲೆ ಪ್ರಮೋದ್‌ ಸೇರಿದಂತೆ ಇನ್ನಿತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಮೋದ್‌ ಮುತಾಲಿಕ್‌ ಸೇರಿದಂತೆ ಇನ್ನಿತರ ವಿರುದ್ಧ ಸಕಲೇಶಪುರ ಠಾಣೆಗೆ ಎಂ.ಕೆ.ಶ್ರೀಧರ್‌ ಎಂಬುವವರು ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ದೂರಿನ ಅನ್ವಯ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್‌ ಠಾಣೆಯಲ್ಲಿ ಪ್ರಮೋದ್‌ ಅವರ ವಿರುದ್ಧ ಬಿಎನ್‌ಎಸ್‌ 2023 U/S-196(1) 353(2) 3(5) ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago