ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯವೂ ಸೂತಕದ ವಾತಾವರಣ ನಿರ್ಮಾಣವಾಗಿದೆ. ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಈ ಬಗ್ಗೆ ಹಾಸನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಸಾವು ಸಂಭವಿಸುತ್ತಿದೆ. ಬಾಣಂತಿಯರ ಸಾವಿಗೆ ಯಾವುದೇ ರೀತಿಯ ಕ್ರಮ ಇಲ್ಲ. ಹಣ ಬಿಡುಗಡೆ ಆಗದೇ ಇರುವುದರಿಂದ ಗುತ್ತಿಗೆದಾರರ ಸಾವಾಗುತ್ತಿದೆ. ಆದರೂ ಸರ್ಕಾರ ಇದಕ್ಕೆ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಜನರ ಸುರಕ್ಷತೆಯ ಬಗ್ಗೆ ಏನೂ ಕ್ರಮ ಕೈಗೊಂಡಿಲ್ಲ. ಶಾಸಕರು ಅನುದಾನಕ್ಕೋಸ್ಕರ ಸರ್ಕಾರವನ್ನು ಮನವಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ನಿತ್ಯವೂ ಕೊಲೆ, ಸುಲಿಗೆ ಹಾಗೂ ಅತ್ಯಾಚಾರ ನಡೆಯುತ್ತಿದೆ. ಸರ್ಕಾರ ಕಠಿಣ ಕ್ರಮ ಎಂದು ಭಜನೆ ಮಾಡುತ್ತಿದೆ. ಕಾಟಾಚಾರಕ್ಕೆ ಸುಗ್ರೀವಾಜ್ಞೆ ಎಂದು ಹೇಳುತ್ತಿದ್ದಾರೆ ಅಷ್ಟೇ ಎಂದು ಟೀಕೆ ಮಾಡಿದರು.