Mysore
20
overcast clouds
Light
Dark

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಹಿಗ್ಗಾಮುಗ್ಗಾ ವಾಗ್ದಾಳಿ

ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಳೆಹಾನಿ ವೀಕ್ಷಣೆಯಿಂದ ಪ್ರಯೋಜನವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಆರ್.ಅಶೋಕ್‌ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳದಲ್ಲಿದ್ದ ಅಧಿಕಾರಿಗಳ ಬಳಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ಅಶೋಕ್‌ ಅವರು, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಮಳೆಹಾನಿ ವೀಕ್ಷಣೆಗೆ ಬಂದರೆ ಪ್ರಯೋಜನ ಆಗಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಎಚ್‌ಡಿಕೆ ಬಂದು ಮಳೆಹಾನಿ ವೀಕ್ಷಣೆ ಮಾಡಿ ಹೋಗಿದ್ದಾರೆ. ನೀವಾದ್ರೂ ಬರ್ತೀರಾ.? ನಿಮಗೆ ಈ ಜಾಗಗಳಿಗೆಲ್ಲಾ ಬರುವ ಯೋಗ್ಯತೆ ಇಲ್ಲಾ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಜನತೆ ಪಾಲಿಗೆ ರಾಜ್ಯ ಸರ್ಕಾರ ಸತ್ತು ಹೋಗಿದೆ. ರಾಜ್ಯ ಸರ್ಕಾರ ಬದುಕಿದೆ ಎಂದು ತೋರಿಸಲಿ ಎಂದು ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಇನ್ನೂ ವಾಲ್ಮೀಕಿ ನಿಗಮದ ಹಣ ಗುಳುಂ ಆಗಿರುವ ಬಗ್ಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಣ ತೆಲಂಗಾಣ ಚುನಾವಣೆಗೆ ಹೋಗಿದೆ. ಈ ಹಗರಣದಿಂದ ಸಚಿವರು ಹಾಗೂ ಶಾಸಕರು ತಲೆತಗ್ಗಿಸುವಂತಾಗಿದೆ. ಈ ಹಗರಣದ ನೇರ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.