ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಳೆಹಾನಿ ವೀಕ್ಷಣೆಯಿಂದ ಪ್ರಯೋಜನವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಹಾಸನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಆರ್.ಅಶೋಕ್ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳದಲ್ಲಿದ್ದ ಅಧಿಕಾರಿಗಳ ಬಳಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಮಳೆಹಾನಿ ವೀಕ್ಷಣೆಗೆ ಬಂದರೆ ಪ್ರಯೋಜನ ಆಗಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಎಚ್‌ಡಿಕೆ ಬಂದು ಮಳೆಹಾನಿ ವೀಕ್ಷಣೆ ಮಾಡಿ ಹೋಗಿದ್ದಾರೆ. ನೀವಾದ್ರೂ ಬರ್ತೀರಾ.? ನಿಮಗೆ ಈ ಜಾಗಗಳಿಗೆಲ್ಲಾ ಬರುವ ಯೋಗ್ಯತೆ ಇಲ್ಲಾ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಜನತೆ ಪಾಲಿಗೆ ರಾಜ್ಯ ಸರ್ಕಾರ ಸತ್ತು ಹೋಗಿದೆ. ರಾಜ್ಯ ಸರ್ಕಾರ ಬದುಕಿದೆ ಎಂದು ತೋರಿಸಲಿ ಎಂದು ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಇನ್ನೂ ವಾಲ್ಮೀಕಿ ನಿಗಮದ ಹಣ ಗುಳುಂ ಆಗಿರುವ ಬಗ್ಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಣ ತೆಲಂಗಾಣ ಚುನಾವಣೆಗೆ ಹೋಗಿದೆ. ಈ ಹಗರಣದಿಂದ ಸಚಿವರು ಹಾಗೂ ಶಾಸಕರು ತಲೆತಗ್ಗಿಸುವಂತಾಗಿದೆ. ಈ ಹಗರಣದ ನೇರ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…