ಹಾಸನ

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಹಲವೆಡೆ ಭಾರೀ ಅವಾಂತರ

ಹಾಸನ: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಾಸನದ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ.

ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಿ ವರುಣನ ಅಬ್ಬರ ಜೋರಾಗಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಹೆಗ್ಗದ್ದೆ ಬಳಿ ನಿರಂತರವಾಗಿ ಭೂಕುಸಿತ ಉಂಟಾಗಿದೆ.

ಇನ್ನು ಸಕಲೇಶಪುರ ಪಟ್ಟಣದ ಹೊರ ವಲಯದ ಬೈಪಾಸ್‌ ರಸ್ತೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತವಾಗಿದೆ. ರಸ್ತೆಯ ಸುರಕ್ಷತೆಗಾಗಿ ನಿರ್ಮಿಸಲಾಗಿದ್ದ ತಡೆಗೋಡೆಗೂ ಸಂಪೂರ್ಣ ಹಾನಿಯಾಗಿದೆ.

ಸಕಲೇಶಪುರದ ಹಲವಡೆ ಭಾರೀ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದ್ದು, ಹಲವು ಮನೆಗಳ ಗೋಡೆಗಳು ಹಾಗೂ ಶಾಲೆಯ ಗೋಡೆ ಸಹ ಕುಸಿತವಾಗಿದೆ. ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

13 mins ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

51 mins ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

2 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

2 hours ago

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

4 hours ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

4 hours ago