Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಅತ್ಯಾಚಾರ ಕೇಸ್ | ತೀರ್ಪು ಕಾಯ್ದಿರಿಸಿದ ಕೋರ್ಟ್‌ ; ಜು.30ಕ್ಕೆ ಪ್ರಜ್ವಲ್‌ ರೇವಣ್ಣ ಭವಿಷ್ಯ ನಿರ್ಧಾರ

prajwal revanna

ಬೆಂಗಳೂರು : ಮೈಸೂರು ಜಿಲ್ಲೆ, ಕೆ‌.ಆರ್ ನಗರದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಇದೇ ತಿಂಗಳ 30 ರಂದು ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ.

ವಾದ- ಪ್ರತಿವಾದವನ್ನು ಪೂರ್ಣಗೊಳಿಸಿದ ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರು ಜುಲೈ 30 ರಂದು ಅಂತಿಮ ಆದೇಶವನ್ನು ಪ್ರಕಟಿಸಲಿದ್ದಾರೆ.

ಪ್ರಾಸಿಕ್ಯೂಷನ್ ಪರ ವಿಶೇಷ ಸಾರ್ವಜನಿಕ ಅಭಿಯೋಜಕ ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದರೆ, ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದಾರೆ.
ಒಂದು ವೇಳೆ ಕೋರ್ಟ್​, ಪ್ರಜ್ವಲ್ ರೇವಣ್ಣನನ್ನು ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಗಾಗಲಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ, ಮನೆ ಕೆಲಸದಾಕೆಯೊಬ್ಬರು ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಈ ಪ್ರಕರಣವು ವಿಶೇಷ ತಿರುವು ಪಡೆದಿತ್ತು.

ಹೊಳೆನರಸೀಪುರ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ವಿಶೇಷ ತನಿಖಾ ತಂಡ (SIT) ಈ ಪ್ರಕರಣದ ತನಿಖೆಯನ್ನು ನಡೆಸಿತು. ಸಿಐಡಿ ಇನ್ಸ್‌ಪೆಕ್ಟರ್ ಶೋಭಾ ಅವರು ತನಿಖೆಯನ್ನು ಮುನ್ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಈ ಚಾರ್ಜ್‌ಶೀಟ್‌ನಲ್ಲಿ ಒಟ್ಟು 26 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿತ್ತು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ಗಂಭೀರವಾಗಿ ನಡೆಸಿತು. ಆರೋಪಿ ಪ್ರಜ್ವಲ್ ರೇವಣ್ಣ ಹಾಗೂ 26 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಯಿತು. ಚಾರ್ಜ್‌ಶೀಟ್‌ನ ಅಂಶಗಳ ಕುರಿತು ಎರಡೂ ಕಡೆಯ ವಕೀಲರು ತಮ್ಮ ವಾದ-ಪ್ರತಿವಾದಗಳನ್ನು ಮಂಡಿಸಿದರು. ವಿಶೇಷ ಸರ್ಕಾರಿ ಅಭಿಯೋಜಕರು, ಆರೋಪಿಯ ವಿರುದ್ಧ ಸಾಕ್ಷಿಗಳ ಆಧಾರದ ಮೇಲೆ ಗಂಭೀರ ಆರೋಪಗಳನ್ನು ಒಡ್ಡಿದರೆ, ಪ್ರಜ್ವಲ್ ಪರ ವಕೀಲರು ತಮ್ಮ ಕಕ್ಷಿದಾರರಿಗೆ ಜಾಮೀನು ಮಂಜೂರು ಮಾಡುವಂತೆ ಕೋರಿದರು. ಆದರೆ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಪ್ರಜ್ವಲ್‌ರ ಜಾಮೀನು ಅರ್ಜಿಗಳು ಈಗಾಗಲೇ ತಿರಸ್ಕೃತವಾಗಿವೆ.

ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ಜಾಮೀನು ಕೋರಿ ಸ್ಥಳೀಯ ನ್ಯಾಯಾಲಯ, ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ, ಎಲ್ಲಾ ನ್ಯಾಯಾಲಯಗಳು ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿವೆ. ಜುಲೈ 9, 2025ರಂದು, ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠವು, ಪ್ರಜ್ವಲ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿ, 10 ದಿನಗಳ ಒಳಗೆ ಆದೇಶ ನೀಡುವಂತೆ ಸೂಚಿಸಿತು.

ನಾಲ್ಕು ಪ್ರಕರಣಗಳ ಪೈಕಿ, ಮನೆ ಕೆಲಸದಾಕೆಯ ದೂರಿನ ಆಧಾರದ ಮೇಲೆ ದಾಖಲಾದ ಈ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ 30, 2025ಕ್ಕೆ ಕಾಯ್ದಿರಿಸಿದೆ. ಈ ತೀರ್ಪು ಪ್ರಕರಣದ ಭವಿಷ್ಯವನ್ನು, ಪ್ರಜ್ವಲ್‌ ರೇವಣ್ಣ ಜಾಮೀನು ಭವಿಷ್ಯವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಇನ್ನುಳಿದ ಮೂರು ಪ್ರಕರಣಗಳ ವಿಚಾರಣೆಯೂ ವಿವಿಧ ಹಂತಗಳಲ್ಲಿ ಮುಂದುವರಿಯಲಿದೆ.

ಪ್ರಾಸಿಕ್ಯೂಷನ್ ಪರ SPP ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ, ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದಾರೆ. ಇನ್ನು ಈ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ ಗಜಾನನ ಭಟ್ ಆದೇಶವನ್ನು ಕಾಯ್ದಿರಿಸಿದ್ದಾರೆ. ಜುಲೈ 30ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದ ತೀರ್ಪು ಪ್ರಕಟಿಸಲಿದೆ.

Tags:
error: Content is protected !!