ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ!
ಒಟ್ಟು 30 ಲಕ್ಷದ 6 ಸಾವಿರ ಭಕ್ತರು ದೇವಿಯ ದರ್ಶನ ಪಡೆದಿದ್ದು, ಎಲ್ಲಾ ಮೂಲಗಳಿಂದ 29 ಕೋಟಿ 55 ಲಕ್ಷದ 27 ಸಾವಿರದ 852 ರೂಪಾಯಿ ಆದಾಯ ಸಂಗ್ರಹವಾಗಿದೆ.
ಕಳೆದ ವರ್ಷ 25.59 ಕೋಟಿ ರೂಪಾಯಿ ಆದಾಯ ಬಂದಿತ್ತು. ಈ ಬಾರಿ ಸುಮಾರು 4 ಕೋಟಿ ರೂಪಾಯಿ ಹೆಚ್ಚುವರಿ ಸಂಗ್ರಹವಾಗಿದೆ.
ಅಕ್ಟೋಬರ್ 29ರಂದು ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ನಡೆದ ಸಾರ್ವಜನಿಕ ದರ್ಶನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಭಕ್ತಸಾಗರವೇ ಹರಿದುಬಂದಿತ್ತು.
ಈ ಮಾಹಿತಿಯನ್ನು ದೇವಾಲಯದ ಆಡಳಿತಾಧಿಕಾರಿ ಜಗದೀಶ್ ಗಂಗಣ್ಣನವರ್ ತಿಳಿಸಿದ್ದಾರೆ.




