ಹಾಸನ

ಹಾಸನದ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ: ಅರಣ್ಯ ಇಲಾಖೆ ಆದೇಶ

ಹಾಸನ: ಇತ್ತೀಚೆಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ.

ಸ್ಥಳೀಯರು ಹಾಗೂ ಪ್ರವಾಸಿಗರ ನಡುವೆ ಆಗಾಗ ನಡೆಯುತ್ತಿದ್ದ ಜಗಳಕ್ಕೆ ಕಡಿವಾಣ ಹಾಕಿ ಪ್ರಕೃತಿಯನ್ನು ರಕ್ಷಿಸಲು ಇಲಾಖೆ ಈ ಕ್ರಮ ಕೈಗೊಂಡಿದೆ. ಪಟ್ಲ ಬೆಟ್ಟ ಸಕಲೇಶಪುರ ಪಟ್ಟಣದಿಂದ 40 ಕಿ.ಮೀ ದೂರದಲ್ಲಿದೆ.

ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಪ್ರವಾಸಿಗರ ಹಿತದೃಷ್ಟಿಯಿಂದ ಮಾರ್ಗಸೂಚಿಗಳನ್ನು ರೂಪಿಸಲು ಚಿಂತನೆ ನಡೆಸಲಾಗುತ್ತಿದೆ. ಭವಿಷ್ಯದಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ವ್ಯವಸ್ಥೆ ಪರಿಚಯಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಸುಬ್ರಹ್ಮಣ್ಯದ ಪ್ರವಾಸಿಗರೊಬ್ಬರಿಗೆ ಸ್ವಂತ ವಾಹನದಲ್ಲಿ ಗಿರಿಧಾಮಕ್ಕೆ ಭೇಟಿ ನೀಡಿದ್ದಕ್ಕೆ ಸ್ಥಳೀಯರು ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಯಸಳೂರು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಗ್ರಾಮಸ್ಥರು ಹೇಳುವ ಪ್ರಕಾರ, ಪಟ್ಲ ಬೆಟ್ಟ ಪ್ರದೇಶದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯ ವಾಹನಗಳ ಚಾಲಕರ ನಡುವೆ ಜಗಳ ಸಾಮಾನ್ಯವಾಗಿದೆ. ಆದರೆ, ಜನರು ಸ್ಥಳೀಯರಿಗೆ ಹೆದರಿ ದೂರು ದಾಖಲಿಸಲು ಹಿಂದೆ ಸರಿಯುವುದರಿಂದ ಇದು ಈವರೆಗೆ ಗಮನಕ್ಕೆ ಬಂದಿಲ್ಲ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ. ಏತನ್ಮಧ್ಯೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಘಟನೆಯ ಬಗ್ಗೆ ಡಿಸಿಎಫ್‌ನಿಂದ ವಿವರವಾದ ವರದಿಯನ್ನು ಕೇಳಿದ್ದಾರೆ.

ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಲ ಬೆಟ್ಟವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಿಳಿಸಿದ್ದಾರೆ. ಹೀಗಾಗಿ ಈ ಪ್ರಕ್ರಿಯೆಯ ನಂತರ ಪ್ರವಾಸಿಗರಿಗೆ ಬೆಟ್ಟಕ್ಕೆ ಅವಕಾಶ ದೊರೆಯುವ ಸಾಧ್ಯತೆಯಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago