Mysore
27
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಹಾಸನದಲ್ಲಿ ಮುಂದುವರಿದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ

Series of Heart Attack Deaths Continue in Hassan: One More Succumbs

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಸಂಜೆ ಮತ್ತೋರ್ವರು ಸಾವನ್ನಪ್ಪಿದ್ದಾರೆ.

41 ವರ್ಷದ ಬಸ್‌ ಕಂಡಕ್ಟರ್‌ ಗಿರೀಶ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಹಾಸನ ತಾಲ್ಲೂಕಿನ ಹ್ಯಾರಾನೆ ಗ್ರಾಮದ ಗಿರೀಶ್‌ ಬಿಎಂಟಿಸಿ ಬಸ್‌ ಕಂಡಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ರಜೆ ಇದ್ದ ಕಾರಣ ಊರಿಗೆ ಬಂದಿದ್ದರು.

ಜಮೀನಿನಲ್ಲಿ ಜೋಳದ ಬೆಳೆಗೆ ಗೊಬ್ಬರ ಹಾಕಿ ಮನೆಗೆ ವಾಪಸ್‌ ಆಗಿದ್ದ ಗಿರೀಶ್‌, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇಂದು ಒಂದೇ ದಿನ ಹಾಸನದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದು, ಕಳೆದ ಒಂದೂವರೆ ತಿಂಗಳಲ್ಲಿ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

Tags:
error: Content is protected !!