Series of Heart Attack Deaths Continue in Hassan: One More Succumbs
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಸಂಜೆ ಮತ್ತೋರ್ವರು ಸಾವನ್ನಪ್ಪಿದ್ದಾರೆ.
41 ವರ್ಷದ ಬಸ್ ಕಂಡಕ್ಟರ್ ಗಿರೀಶ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಹಾಸನ ತಾಲ್ಲೂಕಿನ ಹ್ಯಾರಾನೆ ಗ್ರಾಮದ ಗಿರೀಶ್ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ರಜೆ ಇದ್ದ ಕಾರಣ ಊರಿಗೆ ಬಂದಿದ್ದರು.
ಜಮೀನಿನಲ್ಲಿ ಜೋಳದ ಬೆಳೆಗೆ ಗೊಬ್ಬರ ಹಾಕಿ ಮನೆಗೆ ವಾಪಸ್ ಆಗಿದ್ದ ಗಿರೀಶ್, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇಂದು ಒಂದೇ ದಿನ ಹಾಸನದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದು, ಕಳೆದ ಒಂದೂವರೆ ತಿಂಗಳಲ್ಲಿ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…