ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿತ್ಯ ಶಾಲೆಗೆ ವ್ಯಾನ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ವ್ಯಾನ್ ಚಾಲಕ ರಂಜನ್ ಪರಿಚಯವಾಗಿದ್ದಾನೆ. ಹೀಗೆ ಪರಿಚಯವಾದ ವ್ಯಾನ್ ಚಾಲಕ ರಂಜನ್ ಪರಿಚಯವಾಗಿದ್ದಾನೆ. ಹೀಗೆ ಪರಿಚಯನಾದ ರಂಜನ್, ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಪರಿಣಾಮ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ ಹಿಂದೆ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ.
ರಂಜನ್ ಚನ್ನರಾಯಪಟ್ಟಣದ ಬರಗೂರು ನಿವಾಸಿಯಾಗಿದ್ದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ. ಬಾಲಕಿ ಪೋಷಕರು ನುಗ್ಗೇಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದು, ರಂಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.





