Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಹಾಸನ ಜಿಲ್ಲೆ ಉದಯಪುರ ಬಳಿ ಹಚ್ಚ ಹಸಿರಿನಿಂದ ಕೂಡಿದ ಬೆಟ್ಟ: ಪ್ರವಾಸಿಗರ ಸಂಖ್ಯೆ ಹೆಚ್ಚಳ

ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ.

ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಸ್ವಾಮಿ ನೆಲೆಸಿದ್ದಾನೆ.

ಈ ಬಾರಿ ಮುಂಗಾರು ಮಳೆ ಧಾರಾಕಾರವಾಗಿ ಸುರಿದ ಪರಿಣಾಮ ಬೆಟ್ಟ ಹಚ್ಚ ಹಸಿರಿನಿಂದ ಕೂಡಿದ್ದು, ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಾಗಿದೆ.

ಬೆಟ್ಟದ ತುದಿಯಲ್ಲಿರುವ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೂ ಸಹ ಸಾರ್ವಜನಿಕರು ಹೆಚ್ಚು ಹೆಚ್ಚು ಭೇಟಿ ನೀಡುತ್ತಿದ್ದು, ಹಚ್ಚ ಹಸಿರಿನಿಂದ ಕೂಡಿರುವ ಬೆಟ್ಟವನ್ನು ನೋಡಿ ಖುಷಿಪಡುತ್ತಿದ್ದಾರೆ.

ಪ್ರವಾಸಿಗರ ಸಂಖ್ಯೆಯಲ್ಲಿ ಜಾಸ್ತಿಯಾದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಪರಿಸರ ಇಲಾಖೆ ಸೂಚನೆ ನೀಡಿದ್ದು, ಪ್ರವಾಸಿಗರು ಪ್ಲಾಸ್ಟಿಕ್‌ ಸೇರಿದಂತೆ ಇತರೆ ವಸ್ತುಗಳನ್ನು ಇಲ್ಲಿನ ಪರಿಸರದಲ್ಲಿ ಬಿಸಾಡಿ ಹೋಗದಂತೆ ಮನವಿ ಮಾಡಿದೆ.

ಮಳೆಯ ನಡುವೆಯೂ ಬೆಟ್ಟಕ್ಕೆ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ.  ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಲ್ಲಿ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.

Tags: