ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಸ್ವಾಮಿ ನೆಲೆಸಿದ್ದಾನೆ.
ಈ ಬಾರಿ ಮುಂಗಾರು ಮಳೆ ಧಾರಾಕಾರವಾಗಿ ಸುರಿದ ಪರಿಣಾಮ ಬೆಟ್ಟ ಹಚ್ಚ ಹಸಿರಿನಿಂದ ಕೂಡಿದ್ದು, ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಾಗಿದೆ.
ಬೆಟ್ಟದ ತುದಿಯಲ್ಲಿರುವ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೂ ಸಹ ಸಾರ್ವಜನಿಕರು ಹೆಚ್ಚು ಹೆಚ್ಚು ಭೇಟಿ ನೀಡುತ್ತಿದ್ದು, ಹಚ್ಚ ಹಸಿರಿನಿಂದ ಕೂಡಿರುವ ಬೆಟ್ಟವನ್ನು ನೋಡಿ ಖುಷಿಪಡುತ್ತಿದ್ದಾರೆ.
ಪ್ರವಾಸಿಗರ ಸಂಖ್ಯೆಯಲ್ಲಿ ಜಾಸ್ತಿಯಾದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಪರಿಸರ ಇಲಾಖೆ ಸೂಚನೆ ನೀಡಿದ್ದು, ಪ್ರವಾಸಿಗರು ಪ್ಲಾಸ್ಟಿಕ್ ಸೇರಿದಂತೆ ಇತರೆ ವಸ್ತುಗಳನ್ನು ಇಲ್ಲಿನ ಪರಿಸರದಲ್ಲಿ ಬಿಸಾಡಿ ಹೋಗದಂತೆ ಮನವಿ ಮಾಡಿದೆ.
ಮಳೆಯ ನಡುವೆಯೂ ಬೆಟ್ಟಕ್ಕೆ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಲ್ಲಿ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…