ಹಾಸನ

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.

ಉಮಾಶಂಕರ್(‌40) ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ. ಗಂಗಮ್ಮ ಸಾವು ಬದುಕಿನ ನಡುವೆ ಹೋರಾಡುತ್ತಿರುವ ತಾಯಿ.

ಗಂಗಮ್ಮ ಮಗನಿಗೆ ಮದುವೆ ಮಾಡಲು ಹಲವೆಡೆ ವಧುವನ್ನು ನೋಡಲು ಮುಂದಾಗಿದ್ದರು. ಆದರೆ ಕಳೆದ ವರ್ಷ ಉಮಾಶಂಕರ್‌ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿ ವಾಪಸ್‌ ಬರುವಾಗ ಅಪಘಾತವಾಗಿತ್ತು. ಇದರಿಂದ ಹೊಟ್ಟೆ ಮತ್ತು ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಪರಿಣಾಮ ಸ್ವಲ್ಪ ಬುದ್ಧಿ ಭ್ರಮಣೆಯಾದಂತೆ ಕಾಣುತ್ತಿದ್ದ ಉಮಾಶಂಕರ್‌ ತಾಯಿ ಜೊತೆ ಜಗಳ ತೆಗೆದು ಕೊಲೆ ಮಾಡಲು ಯತ್ನಿಸಿದ್ದಾನೆ.

ಗಾಯಾಳು ತಾಯಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಪಿ ಉಮಾಶಂಕರ್‌ನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

19 mins ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

56 mins ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

57 mins ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

58 mins ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

59 mins ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

1 hour ago