ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.
ಉಮಾಶಂಕರ್(40) ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ. ಗಂಗಮ್ಮ ಸಾವು ಬದುಕಿನ ನಡುವೆ ಹೋರಾಡುತ್ತಿರುವ ತಾಯಿ.
ಗಂಗಮ್ಮ ಮಗನಿಗೆ ಮದುವೆ ಮಾಡಲು ಹಲವೆಡೆ ವಧುವನ್ನು ನೋಡಲು ಮುಂದಾಗಿದ್ದರು. ಆದರೆ ಕಳೆದ ವರ್ಷ ಉಮಾಶಂಕರ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿ ವಾಪಸ್ ಬರುವಾಗ ಅಪಘಾತವಾಗಿತ್ತು. ಇದರಿಂದ ಹೊಟ್ಟೆ ಮತ್ತು ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಪರಿಣಾಮ ಸ್ವಲ್ಪ ಬುದ್ಧಿ ಭ್ರಮಣೆಯಾದಂತೆ ಕಾಣುತ್ತಿದ್ದ ಉಮಾಶಂಕರ್ ತಾಯಿ ಜೊತೆ ಜಗಳ ತೆಗೆದು ಕೊಲೆ ಮಾಡಲು ಯತ್ನಿಸಿದ್ದಾನೆ.
ಗಾಯಾಳು ತಾಯಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಪಿ ಉಮಾಶಂಕರ್‌ನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…