ಹಾಸನ: ಡಿ.ದೇವರಾಜ ಅರಸು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ ಈ ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರಬಲ ವರ್ಗ ಹೆಜ್ಜೆ ಹೆಜ್ಜೆಗೂ ಅವರಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ನಿಮ್ಮೆಲ್ಲರ ಬೆಂಬಲದಿಂದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಹಿಂದುಳಿದ ವರ್ಗದ ರಾಜಕಾರಣಿಗಳು ಇಂತಹ ರಾಜಕೀಯ ಬೆಳವಣಿಗೆ ಹೊಂದುವುದು ಅಷ್ಟು ಸುಲಭದ ಮಾತಲ್ಲ ಎಂದರು.
ಇಲ್ಲಿನ ಸಂಸದ ಶ್ರೇಯಸ್ ಪಟೇಲ್ ಅವರು ವಿಧಾನಸಭೆ ಸೋಲಿನಿಂದ ಹತಾಶರಾಗದೇ ಜನರ ನಿರಂತರ ಒಲವು ಗಳಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಅವರು ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುವ ಮನೋಭಾವ ಹೊಂದಿದ್ದಾರೆ ಎಂದು ಖುಷಿಪಟ್ಟರು.
ಹೊಳೆನರಸೀಪುರ ತಾಲ್ಲೂಕಿನಲ್ಲಿ ಜಾತಿ ವೈಷಮ್ಯ, ಅಭಿವೃದ್ಧಿ ತಾರತಮ್ಯ ಇದೆ ಎಂದು ನಾನು ಬಲ್ಲೆ. ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು 20 ವರ್ಷದಿಂದ ತುಳಿತಕ್ಕೊಳಗಾಗಿ, ತಾರತಮ್ಯದ ನೋವು ಅನುಭವಿಸಿದ್ದಾರೆ. ಹಲವು ಕೆಲಸ ಆಗಬೇಕೆಂದು ನಮ್ಮ ಗಮನಕ್ಕೆ ತಂದಿದ್ದಾರೆ. ನಾನು ಸಿಎಂ ಸಿದ್ದರಾಮಯ್ಯ ಅವರ ಬಳಿ ಮಾತನಾಡುತ್ತೇನೆ. ಅದರಲ್ಲೂ ಹಾಸನದ ಹಳ್ಳಿ ಮೈಸೂರು ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…