ಹಾಸನ

ವರುಣನ ಆರ್ಭಟ ; ಹಾಸನಾಂಬೆ ದೇವಾಲಯದಲ್ಲಿ ಭಕ್ತಾದಿಗಳ ಸಂಖ್ಯೆ ಇಳಿಕೆ

ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಭಕ್ತರು ವಾಪಾಸು ತೆರಳಿದ ಘಟನೆ ನಡದದಿದೆ. ಭಕ್ತಾಧಿಗಳ ಸಂಖ್ಯೆಯಲ್ಲಿ ಇದರಿಂದಾಗಿ ಗಣನೀಯ ಇಳಿಕೆ ಕಂಡಿದೆ.

ಪ್ರತಿ ವರ್ಷದಂತೆ ಈ ವರ್ಷವು ವಿಧಿ ವಿಧಾನದೊಂದಿಗೆ ನೆನ್ನೆ ಪೂಜೆ ಸಲ್ಲಿಸಿ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ತೆರೆದಿದ್ದರಿಂದ ಹಾಸನದ ಆದಿ ದೇವತೆ ಹಾಸನಾಂಬೆ ಭಕ್ತರಿಗೆ ವಿಶ್ವರೂಪ ದರ್ಶನವನ್ನು ಕರಣಿಸಿದಳು. ಮೊಟ್ಟ ಮೊದಲ ಬಾರಿಗೆ ಅಚ್ಚುಕಟ್ಟಾಗಿ ಈ ಬಾರಿ ದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು ಈ ಬಾರಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅನೇಕ ಸೌಕರ್ಯಗಳನ್ನು ಒದಗಿಸಿದೆ.

ಪ್ರತಿ ಬಾರಿಯೂ ಹಾಸನಂಬ ದರ್ಶನ ಸಂದರ್ಭದಲ್ಲಿ ಮಳೆಯಾಗುವುದು ಪ್ರತೀತ. ಆದರೆ ಮೊದಲ ಬಾರಿಗೆ ಪ್ರಾರಂಭದ ದಿನವೇ ವರುಣನ ಆರ್ಭಟ ಹೆಚ್ಚಾಗಿದ್ದರಿಂದ ರಾತ್ರಿ ದರ್ಶನಕ್ಕೆ ಬಂದಂತಹ ಭಕ್ತಾದಿಗಳಿಗೆ ತೊಂದರೆ ಉಂಟಾಯಿತು. ರಾತ್ರಿ ಸುಮಾರು ಒಂಬತ್ತು ಗಂಟೆಗೆ ಆಗಮಿಸಿದ ವರುಣ ಇಂದು ಮುಂಜಾನೆಯ ತನಕ ಸುರಿದುದ್ದರಿಂದ ದರ್ಶನಕ್ಕೆ ಅಡ್ಡಿ ಉಂಟು ಮಾಡಿದ್ದು, ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂತು.

andolana

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

4 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

5 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

5 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

5 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

5 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

5 hours ago