ಹಾಸನ

ಕೌಟುಂಬಿಕ ಕಲಹ: ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ.

ರಾಡ್‌ನಿಂದ ಹೊಡೆದು ಸತೀಶ್‌ ಅವರನ್ನು ಪುತ್ರ ರಂಜಿತ್‌ ಕೊಲೆ ಮಾಡಿದ್ದಾನೆ.

ಕೌಟುಂಬಿಕ ಕಲಹದಿಂದ ಪ್ರತ್ಯೇಕವಾಗಿ ತಾಯಿ ಮಗ ವಾಸವಾಗಿದ್ದರು. ಮೈಸೂರು ಜಿಲ್ಲೆ ಕೆ.ಆರ್.ನಗರದಲ್ಲಿ ತಾಯಿ, ಮಗ ವಾಸವಾಗಿದ್ದರು. ಇದೇ ವಿಚಾರಕ್ಕೆ ತಂದೆಯ ಜೊತೆ ಆಗಾಗ ಜಗಳ ನಡೆಯುತ್ತಿತ್ತು.

ನಿನ್ನೆ ಇದೇ ವಿಚಾರಕ್ಕೆ ತಂದೆ, ಮಗನ ನಡುವೆ ಜಗಳವಾಗಿತ್ತು. ಈ ವೇಳೆ ಸ್ಟೀಲ್‌ ರಾಡ್‌ನಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹಿರಿಸಾವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯಸಭೆಗೆ ನಿತೀಶ್‌ ಕುಮಾರ್‌ ನಾಮಪತ್ರ ಸಲ್ಲಿಕೆ

ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್‌ ಕುಮಾರ್‌ ಅವರು ಇಂದು…

31 mins ago

ನಾಳೆ 17ನೇ ಐತಿಹಾಸಿಕ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ…

51 mins ago

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

7 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

7 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

7 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

8 hours ago