ಹಾಸನ

ಹಾಸನ| 4 ವರ್ಷಗಳ ಬಳಿಕ ಚನ್ನಕೇಶವಸ್ವಾಮಿ ಮೂಲ ವಿಗ್ರಹ ಸ್ಪರ್ಶಿಸಿದ ಸೂರ್ಯ ರಶ್ಮಿ: ಭಕ್ತರ ಹರ್ಷೋದ್ಘಾರ

ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4 ವರ್ಷಗಳ ಬಳಿಕ ಸೂರ್ಯನ ರಶ್ಮಿ ಮತ್ತೊಮ್ಮೆ ಸ್ಪರ್ಶ ಮಾಡಿದೆ.

ಕಳೆದ 2021ರಲ್ಲಿ ದೇವಾಲಯ ಪ್ರವೇಶ ಮಾಡಿದ್ದ ಸೂರ್ಯನ ರಶ್ಮಿ, 2024ರ ತನಕ ಸ್ಪರ್ಶ ಮಾಡಿರಲಿಲ್ಲ. ಮಳೆ, ಮೋಡ ಕವಿದ ವಾತಾವರಣದಿಂದ ವಿಗ್ರಹದ ಮೇಲೆ ಸೂರ್ಯನ ರಶ್ಮಿ ಬೀಳಲು ಅಡ್ಡಿ ಉಂಟಾಗಿತ್ತು. ಈ ವರ್ಷ ಅಡೆತಡೆ ನಿವಾರಣೆಯಾಗಿದ್ದು, ಭಕ್ತರಲ್ಲಿ ಸಾರ್ಥಕದ ಕ್ಷಣ ಮನೆ ಮಾಡಿದೆ.

ಇಂದು ಬೆಳಿಗ್ಗೆ 6 ಗಂಟೆ 15 ನಿಮಿಷಕ್ಕೆ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹದ ಮೇಲೆ ಬಿದ್ದ ಸೂರ್ಯನ ರಶ್ಮಿ, 6 ಗಂಟೆ 42 ನಿಮಿಷಕ್ಕೆ ನವರಂಗ ದ್ವಾರ ದಾಟಿ ಹೋದ ಸೂರ್ಯನ ರಶ್ಮಿಗಳು ದೇವರ ವಿಗ್ರಹದ ಮೇಲೆ ಬೀಳುವುದನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು.

ಸೂರ್ಯನ ರಶ್ಮಿ ಶ್ರೀ ಚನ್ನಕೇಶವಸ್ವಾಮಿ ವಿಗ್ರಹ ಸ್ಪರ್ಶಿಸುತ್ತಿದ್ದಂತೆ ಗರ್ಭಗುಡಿ ಬಂದ್‌ ಮಾಡಲಾಯಿತು.

ಪ್ರತಿ ವರ್ಷ ಜಾತ್ರೆ ಮುಗಿದ ನಂತರ ಶ್ರೀ ಚನ್ನಕೇಶವಸ್ವಾಮಿ ದೇವಾಲಯ ಪ್ರವೇಶಿಸುವ ಸೂರ್ಯನ ರಶ್ಮಿ ಬೀಳುವುದನ್ನು ಕಂಡ ಭಕ್ತರು ಕೃತಾರ್ಥರಾದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

5 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

5 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

6 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

6 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

6 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

6 hours ago