Mysore
30
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಹಾಸನ: ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವು

ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಕೇರಳಾಪುರ ಗ್ರಾಮದ ಸತೀಶ್‌ ಎಂಬುವವರೇ ಹೃದಯಾಘಾತದಿಂದ ಸಾವನ್ನಪ್ಪಿರುವ ಶಿಕ್ಷಕರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆಯೇ ಸತೀಶ್‌ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

 

Tags:
error: Content is protected !!