ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಇಂದು ಓಪನ್ ಆಗಿದ್ದು, ಹಾಸನಾಂಬೆ ದೇವಾಲಯದಲ್ಲಿ ಪೂಜೆ ಪುನಸ್ಕಾರಗಳು ಆರಂಭವಾಗಿವೆ.
ಇದನ್ನು ಓದಿ : ಹಾಸನಾಂಭ ದರ್ಶನ | ಮೈಸೂರು ಸೇರಿದಂತೆ ವಿವಿಧ ಜಿಲ್ಲೆಯಿಂದ ಹೆಚ್ಚುವರಿ ಬಸ್
ಈ ವೇಳೆ ಸಚಿವ ಕೃಷ್ಣಭೈರೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಆಶ್ವೀಜ ಮಾಸದ ಮೊದಲ ಗುರುವಾರ ಅರಸು ವಂಶಸ್ಥರು ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು.
ನಾಳೆಯಿಂದ ಹಾಸನಾಂಬೆ ಭಕ್ತರಿಗೆ ದರ್ಶನ ನೀಡಲಿದ್ದು, ತಾಯಿಯ ದರ್ಶನಕ್ಕೆ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಬಲಿಪಾಡ್ಯಮಿಯ ಮಾರನೇಯ ದಿನ ಗಣ್ಯರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ, ನೈವೇದ್ಯಾ ಸೇರಿದಂತೆ ವಿವಿಧ ಅಲಂಕಾರಗಳು ಇರುವಂತೆಯೇ ಬಾಗಿಲನ್ನು ಮುಚ್ಚಲಾಗುತ್ತದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…