Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಬಾಗಿಲು ಓಪನ್‌

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇದೇ ಅಕ್ಟೋಬರ್.‌9ರಂದು ತೆರೆಯಲಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್‌ ಪ್ಯಾಕೇಜ್‌, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ಅಕ್ಟೋಬರ್.‌9ರಂದು ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿಯ ಬಾಗಿಲು ತೆರೆಯಲಿದ್ದು, ಅಕ್ಟೋಬರ್.‌23ರಂದು ಮುಚ್ಚಲಾಗುತ್ತದೆ.

ಇದನ್ನೂ ಓದಿ:-ರಾಜ್ಯದಲ್ಲಿ ಅಕ್ಟೋಬರ್.‌12ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ

ಇನ್ನು ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಹಾಸನಾಂಬ ದೇವಿಯ ಒಡವೆಗಳನ್ನು ಇಂದು ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ದೇವಾಲಯಕ್ಕೆ ರವಾನಿಸಲಾಯಿತು.

ದೇವಾಲಯದ ಪ್ರಧಾನ ಅರ್ಚಕ ನಾಗರಾಜ್‌ ಅವರ ನೇತೃತ್ವದಲ್ಲಿ ದೇವಿಯ ಆಭರಣಗಳನ್ನು ಗರ್ಭಗುಡಿಗೆ ತಲುಪಿಸಲಾಯಿತು. ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ಅಕ್ಟೋಬರ್.‌23ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.

Tags:
error: Content is protected !!